ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಡುವೆ ಸತತ ಮಳೆಯಿಂದಾಗಿ ಹಲವು ನದಿಗಳು ತುಂಬಿ ಹರಿಯುತ್ತಿದ್ದು, ಸೇತುವೆಗಳು ಜಲಾವೃತವಾಗಿವೆ. ರಾಜ್ಯದ ವಿವಿಧೆಡೆ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿವಿಧ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ.
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೊಷಿಸಿದೆ.ಯಾದಗಿರಿ, ಹಾಸನ, ಕಲಬರಗಿ, ಬೆಳಗಾವಿ, ಬೀದರ್, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.