ನವದೆಹಲಿ: ಜೈಲಿನಲ್ಲಿರುವ ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತ್ಪಾಲ್ ಸಿಂಗ್ 2024 ರ ಲೋಕಸಭಾ ಚುನಾವಣೆಯಲ್ಲಿ ಪಂಜಾಬ್ ನ ಖದೂರ್ ಸಾಹಿಬ್ ಸ್ಥಾನದಿಂದ 21,000 ಕ್ಕೂ ಹೆಚ್ಚು ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಭರದಿಂದ ಸಾಗಿದೆ.ಜೈಲಿನಲ್ಲಿರುವ ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತ್ ಪಾಲ್ ಸಿಂಗ್ ಮುನ್ನಡೆ ಸಾಧಿಸಿದ್ದಾರೆ.
ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ಅಡಿಯಲ್ಲಿ ಅಸ್ಸಾಂನ ದಿಬ್ರುಗಢ ಜೈಲಿನಲ್ಲಿರುವ ತೀವ್ರಗಾಮಿ ಸಿಖ್ ಬೋಧಕ ಅಮೃತ್ಪಾಲ್ ಸಿಂಗ್ ಖದೂರ್ ಸಾಹಿಬ್ ನಿಂದ ಸ್ಪರ್ಧಿಸುತ್ತಿದ್ದಾರೆ. ಅಮೃತಪಾಲ್ ಸಿಂಗ್ 45,180 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.