ಬೆಂಗಳೂರು : ಕೊರೊನಾ ಬಂದರೆ ವಿಶೇಷ ರಜೆ ಕೊಡಬೇಕು, ಏಳು ದಿನ ಹೋಮ್ ಐಸೋಲೇಷನ್ ಕಡ್ಡಾಯ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಇಂದು ಆರೋಗ್ಯ ಇಲಾಖೆಯ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಕೊರೊನಾ ಬಂದರೆ ವಿಶೇಷ ರಜೆ ಕೊಡಬೇಕು, ಏಳು ದಿನ ಹೋಮ್ ಐಸೋಲೇಷನ್ ಕಡ್ಡಾಯ, ಖಾಸಗಿ ವಲಯಗಳಿಗೂ ಇದು ಅನ್ವಯವಾಗಲಿದೆ ಎಂದರು. ಶೀಘ್ರದಲ್ಲೇ ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಲಿದೆ ಎಂದರು.
60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಕೊರೊನಾ ಬಗ್ಗೆ ಜನರು ಎಚ್ಚರಿಕೆ ವಹಿಸಬೇಕು. ಸದ್ಯಕ್ಕೆ ಯಾವುದೇ ರೀತಿಯ ಹೊಸ ವ್ಯಾಕ್ಸಿನ್ ಬಂದಿಲ್ಲ. ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ವಾರ್ಡ್ ಮಾಡಲಾಗಿದೆ ಎಂದು ಅವರು ಹೇಳಿದರು. ಎಲ್ಲರೂ ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿ ಪಾಲಿಸಬೇಕು. ರಾಜೀವ್ ಗಾಂಧಿ ಸೇರಿ ಹಲವು ಕಡೆ ಪ್ರತ್ಯೇಕ ವಾರ್ಡ್ ವ್ಯವಸ್ಥೆ ಮಾಡಲಾಗಿದೆ. ಆಸ್ಪತ್ರೆಗಳಲ್ಲಿ ಆ್ಯಕ್ಸಿಜನ್ ಗೆ ಕೊರತೆಯಾಗದಂತೆ ಕ್ರಮ ಕೈಗೊಂಡಿದ್ದೇವೆ, ಜನರು ಭಯಪಡುವ ಅಗತ್ಯವಿಲ್ಲ, ಆದರೆ ಮುನ್ನೆಚ್ಚರಿಕೆ ವಹಿಸಬೇಕು. ಆರೋಗ್ಯ ದೃಷ್ಟಿಯಿಂದ ಮಾಸ್ಕ್ ಧರಿಸುವುದು ಒಳ್ಳೆಯದು ಎಂದರು.