ಬೆಂಗಳೂರು : ಕನ್ನಡಿಗರ ಮೇಲೆ ಹಲ್ಲೆ, ದೌರ್ಜನ್ಯ, ಮರಾಠಿ ಪುಂಡರಿಂದ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಹಾಗೂ ಮೇಕೆದಾಟು ಸೇರಿದಂತೆ ಹಲವು ನೀರಾವರಿ ಯೋಜನೆ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆ ಹೋರಾಟಗಾರ ವಾಟಾಳ್ ನಾಗರಾಜ್ ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.
ರಾಜ್ಯದ ಹಲವು ಕಡೆ ‘ಕರ್ನಾಟಕ ಬಂದ್’ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಂದಿನಂತೆ ಬಸ್, ಆಟೋ ಸಂಚಾರ ಆರಂಭವಾಗಿದೆ. ಚಾಮರಾಜನಗರ, ಕಲಬುರಗಿ, ಹಾಸನ ಸೇರಿದಂತೆ ಹಲವು ಕಡೆ ಕರ್ನಾಟಕ ಬಂದ್’ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಂದಿನಂತೆ ಬಸ್, ಆಟೋ ಸಂಚಾರ ಆರಂಭವಾಗಿದೆ. ಅಂಗಡಿ ಮುಂಗಟ್ಟುಗಳು ಓಪನ್ ಆಗಿದೆ. ಜನರು ಎಂದಿನಂತೆ ತಮ್ಮ ತಮ್ಮ ಕೆಲಸಕ್ಕೆ ಹೋಗುತ್ತಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಂದ್ ಬಿಸಿ ಏನು ತಟ್ಟಲಿಲ್ಲ. ಬೆಳಗಾವಿ , ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಬಲವಂತವಾಗಿ ಅಂಗಡಿ ಬಂದ್ ಮಾಡಿಸಲಾಗಿದೆ. ಕೆಲವು ಕಡೆ ಅಂಗಡಿಗಳನ್ನ ಬಂದ್ ಮಾಡುವಂತೆ ಪ್ರತಿಭಟನಾಕಾರರು ಅಂಗಡಿ ಅಂಗಡಿಗೆ ಹೋಗಿ ಮನವಿ ಮಾಡಿದ್ದಾರೆ.
ಮೈಸೂರು, ಮಂಡ್ಯದಲ್ಲಿ ಕನ್ನಡಪರ ಹೋರಾಟಗಾರರ ಪ್ರತಿಭಟನೆ ಕಾವೇರಿದೆ. ಇಂದು ಮುಂಜಾನೆಯಿಂದಲೂ ಬೇಕು..ಬೇಕು ನ್ಯಾಯ ಬೇಕು ಎಂದು ರಸ್ತೆ ಮೇಲೆ ಮಲಗಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ನಡೆಸಿದ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಡ್ಯದಲ್ಲಿ ತಲೆ ಮೇಲೆ ಹುಲ್ಲು ಹೊತ್ತು ಪ್ರತಿಭಟನೆ ನಡೆಸಲಾಗುತ್ತಿದೆ.