ಮೈಸೂರು : ಸಾಲಬಾಧೆ ತಾಳಲಾರದೇ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹರೀನಹಳ್ಳಿಯಲ್ಲಿ ನಡೆದಿದೆ.
ಕರ್ಣಕುಪ್ಪೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕುಮಾರಸ್ವಾಮಿ (55) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 15 ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡಿದ್ದ ಕುಮಾರಸ್ವಾಮಿ ಸಾಲಬಾಧೆ ತಾಳಲಾರದೇ ಕ್ರಿಮಿನಾಶಕದ ಕಾಳು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.