ಬೆಂಗಳೂರು : ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಇಂದಿನಿಂದ ಅವಕಾಶ ಕಲ್ಪಿಸಲಾಗಿದ್ದು, ಹಲವಡೆ ಸರ್ವರ್ ಡೌನ್ ಸಮಸ್ಯೆಯಿಂದ ಪಡಿತರ ಚೀಟಿದಾರರು ಪರದಾಡುವಂತಾಗಿದೆ.
ಇಂದು ಮಧ್ಯಾಹ್ನ 12 ಗಂಟೆಯಿಂದ ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದ್ದು, http://ahara.kar.nic.in ವೆಬ್ ಸೈಟ್ ಓಪನ್ ಆದ ಬಳಿಕ ಹಲವಡೆ ಸರ್ವರ್ ಡೌನ್ ಸಮಸ್ಯೆ ಕಾಡುತ್ತಿದೆ. ತಾಂತ್ರಿಕ ಕಾರಣದಿಂದ ಸರ್ವರ್ ಡೌನ್ ಆಗಿದ್ದು, ಪಡಿತರ ಚೀಟಿದಾರರಿಗೆ ಭಾರೀ ಸಮಸ್ಯೆಯಾಗಿದೆ.
ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಗ್ರಾಮಾ ಒನ್ ಸೇವಾ ಕೇಂದ್ರಗಳಿಗೆ ಹೋದ ಪಡಿತರ ಚೀಟಿದಾರರು ಹೆಸರು ಸೇರ್ಪಡೆ ಮಾಡಲು ಪರದಾಡುವಂತಾಗಿದೆ. ಗೃಹಲಕ್ಷ್ಮೀ, ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿರುವುದರಿಂದ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಸರ್ವರ್ ಸಮಸ್ಯೆ ಕಾಡುತ್ತಿದೆ ಎನ್ನಲಾಗಿದೆ.
ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ\ತಿದ್ದುಪಡಿ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ
ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.
ಮೊದಲು ಇಲಾಖೆಯ ಅಧಿಕೃತ ವೆಬ್ ಸೈಟ್ https://ahara.kar.nic.in/home ಭೇಟಿ ನೀಡಿ
ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.
ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.
ಹೊಸ ಪೇಜ್ ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅಪಲೋಡ್ ಮಾಡಿ.
ಅಪ್‌ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್‌ಮೀಟ್ ಮಾಡಿ.
ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನೆಗೆ ಅಪ್‌ಡೇಟ್ ಆಗಿರುವ ಹೊಸ ಪಡಿತರ ಚೀಟಿಯನ್ನೂ ಕಳಿಸಲಾಗುತ್ತದೆ.