ಬೆಂಗಳೂರು ; ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಅದ್ಧೂರಿಯಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಧ್ವಜಾರೋಹಣದ ಬಳಿಕ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡುತ್ತಿದ್ದು, ರಾಜ್ಯದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದ್ದು, ಜನರಿಗೆ ನಾವು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ದೇಶದ ಅಭಿವೃದ್ಧಿ ದೃಷ್ಟಿಯಲ್ಲಿಟ್ಟುಕೊಂಡು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.
ರಾಜ್ಯ ಸರ್ಕಾರ ಬಡತನ ನಿರ್ಮೂಲನೆ ಕೆಲಸ ಮಾಡುತ್ತಿದೆ. ನಾವು ಈಗಾಗಲೇ ನೀಡಿರುವ ಆಶ್ವಾಸನೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಲಿದೆ. ಮಹಿಳೆಯರಿಗೆ 2,000 ರೂ. ಆರ್ಥಿಕ ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 27 ರಂದು ಚಾಲನೆ ನೀಡಲಾಗುತ್ತಿದ್ದು, ಅಂದೇ ಮಹಿಳೆಯರ ಖಾತೆಗೆ 2,000 ರೂ. ಜಮೆ ಆಗಲಿದೆ ಎಂದು ತಿಳಿಸಿದ್ದಾರೆ.