alex Certify BREAKING : ಏಷ್ಯನ್ ಗೇಮ್ಸ್ ನ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ತಂಡ ಸ್ಪರ್ಧೆಯಲ್ಲಿ ಭಾರತಕ್ಕೆ ಬೆಳ್ಳಿ ಪದಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಏಷ್ಯನ್ ಗೇಮ್ಸ್ ನ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ತಂಡ ಸ್ಪರ್ಧೆಯಲ್ಲಿ ಭಾರತಕ್ಕೆ ಬೆಳ್ಳಿ ಪದಕ

ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು,  ಇಂದು ಭಾರತ ತಂಡ ಚಿನ್ನ ಮತ್ತು ಬೆಳ್ಳಿ ಪದಕವನ್ನು ಗೆದ್ದುಕೊಂಡಿದೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ತಂಡ ಸ್ಪರ್ಧೆಯಲ್ಲಿ ಭಾರತಕ್ಕೆ ಬೆಳ್ಳಿ ಪದಕ ಲಭಿಸಿದೆ.

ಏಷ್ಯನ್ ಗೇಮ್ಸ್ ನ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ತಂಡ ಸ್ಪರ್ಧೆಯಲ್ಲಿ ಭಾರತ ತಂಡ ಬೆಳ್ಳಿ ಪದಕ ಸಿಕ್ಕಿದೆ. ಭಾರತ ಇಶಾ ಸಿಂಗ್, ಪಾಲಕ್ ಮತ್ತು ದಿವ್ಯಾ ತಡಿಗೋಳ್ ಸುಬ್ಬರಾಜು ಬೆಳ್ಳಿ ಪದಕ ಗೆದ್ದಿದ್ದಾರೆ.

ಭಾರತ ತಂಡವು ಒಟ್ಟು 1731 ಅಂಕಗಳನ್ನು ಗಳಿಸಿದ್ದು, ಹೊಸ ಗೇಮ್ಸ್ ದಾಖಲೆಯೊಂದಿಗೆ ಚಿನ್ನ ಗೆದ್ದ ಚೀನಾಕ್ಕಿಂತ ಐದು ಹಿಂದಿದೆ. ಚೈನೀಸ್ ತೈಪೆ 1723 ಅಂಕಗಳೊಂದಿಗೆ ಕಂಚಿನ ಪದಕ ಗೆದ್ದುಕೊಂಡಿತು.ಇಶಾ (579) ಮತ್ತು ಪಾಲಕ್ (577) ಕ್ರಮವಾಗಿ ಐದು ಮತ್ತು ಏಳನೇ ಸ್ಥಾನ ಪಡೆದು ವೈಯಕ್ತಿಕ ಫೈನಲ್ಗೆ ಪ್ರವೇಶಿಸಿದ್ದಾರೆ. ದಿವ್ಯಾ (575) 10ನೇ ಸ್ಥಾನ ಪಡೆದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...