ಹೌಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಇಂದು ಭಾರತೀಯ ಮಹಿಳಾ ಗಾಲ್ಫ್ ಆಟಗಾರ್ತಿ ಆದಿತಿ ಬೆಳ್ಳಿ ಪದಕ ಪಡೆದಿದ್ದಾರೆ.
ಏಷ್ಯನ್ ಗೇಮ್ಸ್ ನಲ್ಲಿ ಮಹಿಳಾ ವೈಯಕ್ತಿಕ ವಿಭಾಗದಲ್ಲಿ ಭಾರತದ ಗಾಲ್ಫ್ ಆಟಗಾರ್ತಿ ಅದಿತಿ ಬೆಳ್ಳಿ ಪದಕ ಗೆದ್ದಿದ್ದಾರೆ. ಈ ಮೂಲಕ ಅವರು ಏಷ್ಯನ್ ಗೇಮ್ಸ್ ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.