ಡಬ್ಲ್ಯುಎಫ್ಐ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಸಹಾಯಕ ಸಂಜಯ್ ಸಿಂಗ್ ಅವರು ಭಾರತೀಯ ಕುಸ್ತಿ ಒಕ್ಕೂಟದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಬೆನ್ನಲ್ಲೇ ಕುಸ್ತಿಪಟು ಸಾಕ್ಷಿ ಮಲಿಕ್ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಬಿರ್ಜ್ ಭೂಷಣ್ ಸಹಾಯಕ ಸಂಜಯ್ ಸಿಂಗ್ ಡಬ್ಲ್ಯುಎಫ್ಐ ಅಧ್ಯಕ್ಷರಾಗಿ ಮುಂದುವರಿದರೆ ಕುಸ್ತಿ ತೊರೆಯುವುದಾಗಿ ಸಾಕ್ಷಿ ಮಲಿಕ್ ಹೇಳಿದ್ದಾರೆ. ಹಿಂದಿನ ಡಬ್ಲ್ಯುಎಫ್ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳು ಕೇಳಿಬಂದ ನಂತರ ಅವರ ವಿರುದ್ಧ ದೊಡ್ಡ ಪ್ರತಿಭಟನೆಗಳು ನಡೆದಿದ್ದವು. ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಅವರು ಬ್ರಿಜ್ ಭೂಷಣ್ ವಿರುದ್ಧ ಭಾರೀ ಪ್ರತಿಭಟನೆ ನಡೆಸಿದ್ದರು.
ಏಪ್ರಿಲ್ನಲ್ಲಿ, ಡಬ್ಲ್ಯುಎಫ್ಐ ಮುಖ್ಯಸ್ಥರು ಅಪ್ರಾಪ್ತ ವಯಸ್ಕ ಸೇರಿದಂತೆ ವಿವಿಧ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಬಜರಂಗ್, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ದೆಹಲಿಯ ಜಂತರ್ ಮಂತರ್ನಲ್ಲಿ ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ್ದರು.