![](https://kannadadunia.com/wp-content/uploads/2023/10/Asian-para-Games-9.jpg)
ಹೌಂಗ್ಜೌ : ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಭಾರತದ ಸ್ಪರ್ಧಿಗಳು ಐತಿಹಾಸಿಕ ಸಾಧನೆ ಮಾಡಿದ್ದು, ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಈವರೆಗೆ 100 ಕ್ಕೂ ಹೆಚ್ಚು ಪದಕಗಳನ್ನು ಗೆದ್ದಿದೆ.
ಭಾರತದ ಪ್ಯಾರಾ ಕ್ರೀಡಾಪಟುಗಳು 4ನೇ ಆವೃತ್ತಿಯ ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಸಾರ್ವಕಾಲಿಕ ಗರಿಷ್ಠ 100 ಪದಕ ಗೆಲುವಿನ ಹೊಸ ದಾಖಲೆ ಸೃಷ್ಟಿಸಿದ್ದಾರೆ. 2018ರ ಕಳೆದ ಆವೃತ್ತಿಯಲ್ಲಿ 72 ಪದಕ ಗೆದ್ದುಕೊಂಡಿದ್ದು ಭಾರತದ ಈ ಹಿಂದಿನ ಶ್ರೇಷ್ಠ ಸಾಧನೆಯಾಗಿತ್ತು