ಬೆಂಗಳೂರು : ಮುಡಾ ಹಗರಣದ ತನಿಖೆ ತೀವ್ರಗೊಂಡಿದ್ದು, ಲೋಕಾಯುಕ್ತ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರನ್ನು ವಿಚಾರಣೆಗೊಳಪಡಿಸಿದ್ದಾರೆ.
ಸುಮಾರು 3 ಗಂಟೆಗಳ ಕಾಲ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಬಹಳ ಗೌಪ್ಯವಾಗಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರನ್ನು ವಿಚಾರಣೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.ಮುಡಾ ಹಗರಣದಲ್ಲಿ ಲೋಕಾಯುಕ್ತ ನೋಟಿಸ್ ಬಂದ ಹಿನ್ನೆಲೆ ಅವರು ವಿಚಾರಣೆಗೆ ಹಾಜರಾಗಿದ್ದಾರೆ. ಮುಡಾ ಹಗರಣದಲ್ಲಿ ಪಾರ್ವತಿ ಎ-2 ಆರೋಪಿಯಾಗಿದ್ದಾರೆ.
ಮುಡಾ’ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬದವರ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.ಎಫ್ ಐ ಆರ್ ನಲ್ಲಿ ಸಿಎಂ ಸಿದ್ದರಾಮಯ್ಯ ಎ-1, ಪತ್ನಿ ಪಾರ್ವತಿ ಎ-2 ಎಂದು ಹೆಸರಿಸಲಾಗಿದೆ. ಹಾಗೆಯೇ ಸಿಎಂ ಸಿದ್ದರಾಮಯ್ಯ ಎ1, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಎ 2, ಸಹೋದರ ಮಲ್ಲಿಕಾರ್ಜುನ ಸ್ವಾಮಿ ಎ 3, ಜಮೀನು ಮಾರಿದ ದೇವರಾಜು ಎ-4 ಆರೋಪಿ ಎಂದು ಗುರುತಿಸಲಾಗಿದೆ.