ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮುಂದಿನ ಮೂರು ಋತುಗಳ ವೇಳಾಪಟ್ಟಿಯನ್ನು ಪ್ರಕಟಿಸುವ ಮೂಲಕ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಹತ್ವದ ಹೆಜ್ಜೆ ಇಟ್ಟಿದೆ.
2025ರ ಐಪಿಎಲ್ ಟೂರ್ನಿ ಮಾರ್ಚ್ 14ರಿಂದ ಮೇ 25ರವರೆಗೆ ನಡೆಯಲಿದೆ. ಬಿಸಿಸಿಐ 2026 ಮತ್ತು 2027ರ ಋತುಗಳ ವೇಳಾಪಟ್ಟಿಯನ್ನು ಅಂತಿಮಗೊಳಿಸಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ಮಾರ್ಚ್ 14 ರಂದು ಪ್ರಾರಂಭವಾಗಲಿದ್ದು, ಫೈನಲ್ ಪಂದ್ಯ ಮೇ 25 ರಂದು ನಡೆಯಲಿದೆ. ಐಪಿಎಲ್ ಆಡಳಿತ ಮಂಡಳಿಯು ಎಲ್ಲಾ ಹತ್ತು ಫ್ರಾಂಚೈಸಿಗಳಿಗೆ ಅಧಿಕೃತ ಸಂವಹನವನ್ನು ಕಳುಹಿಸಿದ್ದರಿಂದ ಮುಂದಿನ ಮೂರು ಋತುಗಳ ದಿನಾಂಕಗಳನ್ನು ಖಚಿತಪಡಿಸಲಾಗಿದೆ. 2026ರ ಆವೃತ್ತಿಯು ಮಾರ್ಚ್ 15ರಿಂದ ಮೇ 31ರವರೆಗೆ ನಡೆಯಲಿದ್ದು, 2027ರ ಆವೃತ್ತಿಯು ಮಾರ್ಚ್ 14ರಿಂದ ಮೇ 30ರವರೆಗೆ ನಡೆಯಲಿದೆ.
ಜೂನ್ 2025 ರಲ್ಲಿ ನಿಗದಿಯಾಗಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (ಡಬ್ಲ್ಯುಟಿಸಿ) ಸೈಕಲ್ 2023-25 ಫೈನಲ್ಗೆ ತಯಾರಿ ನಡೆಸಲು ಆಟಗಾರರಿಗೆ ಸಾಕಷ್ಟು ಸಮಯವನ್ನು ನೀಡಲು ಬಿಸಿಸಿಐ ಋತುವನ್ನು ಮುಂಚಿತವಾಗಿ ಪ್ರಾರಂಭಿಸಲು ಯೋಜಿಸಿದೆ.