ಬೆಂಗಳೂರು : ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ತಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ರೇಷ್ಮೆ ಮಾರಾಟ ಮಂಡಳಿ ನಿಯಮಿತ ಎಂಡಿಯಾಗಿ ಡಿ. ರೂಪಾ ಅವರನ್ನು ವರ್ಗಾವಣೆ ಮಾಡಲಾಗಿದೆ.ಡಿ ರೂಪಾ ಅವರು ಆಂತರಿಕ ಭದ್ರತಾ ದಳ (ಐಎಸ್ ಡಿ) ಐಜಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಇತ್ತೀಚೆಗೆ ಐಜಿಪಿ ಡಿ.ರೂಪಾ ವಿರುದ್ಧ ದಾಖಲೆ ಕಳುವು ಆರೋಪ ಮಾಡಿದ್ದ ಡಿಐಜಿ ವರ್ತಿಕಾ ಕಟಿಯಾರ್ ಅವರನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು. ಐಜಿಪಿ ಡಿ.ರೂಪಾ ಕೆಳಹಂತದ ಅಧಿಕಾರಿಗಳನ್ನು ಬಳಸಿಕೊಂಡು ತನ್ನ ಕೊಠಡಿಯ ದಾಖಲೆಗಳನ್ನು ಕಳುವು ಮಾಡಿದ್ದು, ನನ್ನ ವಿರುದ್ಧ ಷಡ್ಯಂತ್ರ ನಡೆಯುವ ಸಾಧ್ಯತೆ ಇದೆ ಎಂದು ಆರ್ಪಿಸಿ ಡಿಐಜಿ ವರ್ತಿಕಾ ಕಟಿಯಾರ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ದೂರು ನೀಡಿದ್ದರು. ದೂರು ನೀಡಿದ್ದ ವರ್ತಿಕಾ ಕಟಿಯಾರ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು, ಆಂತರಿಕ ಭದ್ರತಾ ವಿಭಾಗದ ಡಿಐಜಿಯಾಗಿದ್ದ ವರ್ತಿಕಾ ಕಟಿಯಾರ್ ಅವರನ್ನು ಸಿವಿಲ್ ಡಿಫೆನ್ಸ್ ಮತ್ತು ಹೋಮ್ ಗಾರ್ಡ್ಸ್ ವಿಭಾಗಕ್ಕೆ ಡಿಐಜಿ ಹಾಗೂ ಹೆಚ್ಚುವರಿ ಕಮಾಂಡೆಂಟ್ ಆಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.