alex Certify BREAKING : ನಿಯಮ ಬಾಹಿರ ಕ್ರಮ ಸಹಿಸುವುದಿಲ್ಲ : ‘ಮೈಕ್ರೋ ಫೈನಾನ್ಸ್’ ಕಂಪನಿಗಳಿಗೆ ‘CM ಸಿದ್ದರಾಮಯ್ಯ’ ಖಡಕ್ ಎಚ್ಚರಿಕೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನಿಯಮ ಬಾಹಿರ ಕ್ರಮ ಸಹಿಸುವುದಿಲ್ಲ : ‘ಮೈಕ್ರೋ ಫೈನಾನ್ಸ್’ ಕಂಪನಿಗಳಿಗೆ ‘CM ಸಿದ್ದರಾಮಯ್ಯ’ ಖಡಕ್ ಎಚ್ಚರಿಕೆ.!

ಬೆಂಗಳೂರು : ನಿಯಮ ಬಾಹಿರ ಕ್ರಮ ಸಹಿಸುವುದಿಲ್ಲ ಎಂದು ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ನೊಂದ ಜನರು ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತ ಸರ್ಕಾರ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಮುಂದಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ.

ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು? ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ ? ರಿಸರ್ವ್ ಬ್ಯಾಂಕಿನ ಷರತ್ತು ಮತ್ತು ನಿಬಂಧನೆಗಳನ್ನು ಸಾಲಗಾರರಿಗೆ ಅವರ ಆಡು ಭಾಷೆಯಲ್ಲಿ ಅರ್ಥ ಮಾಡಿಸಿದ್ದೀರಾ? ಆರ್ ಬಿಐ ನಿಯಮ ಮೀರಿ ಸಾಲ ಕೊಡುತ್ತಿದ್ದೀರಾ ? ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ? ಮರುಪಾವತಿಯ ಸಾಮರ್ಥ್ಯ ಗಮನಿಸದೆ ಪದೇ ಪದೇ ಸಾಲ ಕೊಡುತ್ತಿರುವುದು ಏಕೆ?’ ಎಂದೂ ಕೇಳಿದರು.

ಸಾಲಗಾರರಿಗೆ ಸಾಲ ಕೊಡುವ ಮೊದಲು ಆಧಾರ್ KYC ಮಾಡಿಸುತ್ತಿಲ್ಲ. ಇದನ್ನು ಮಾಡಿಸಿದ್ದರೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುವುದು ತಪ್ಪುತ್ತಿತ್ತು. ಇಂತಹ ತಪ್ಪುಗಳನ್ನು ಮಾಡಿ ಸಾಲ ಕೊಡುತ್ತಿರುವುದರ ಉದ್ದೇಶವೇನು? ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...