ಬೆಂಗಳೂರು : ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಹಿಂದೆ ಐಸಿಸ್ ಉಗ್ರಗಾಮಿಗಳ ಕೈವಾಡವಿದೆ ಎಂದು ಬಿಜೆಪಿ ಶಾಸಕ ಸಿದ್ದು ಸವದಿ ಹೊಸ ಬಾಂಬ್ ಸಿಡಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈನಮುನಿ ಸ್ವಾಮೀಜಿಯನ್ನು ಕರೆಂಟ್ ಶಾಕ್ ಕೊಟ್ಟು, ಬಳಿಕ ದೇಹವನ್ನು ತುಂಡು ತುಂಡು ಮಾಡಿ ಕೊಂದಿರುವುದು ನೋಡಿದ್ರೆ. ಈ ಹತ್ಯೆಯ ಹಿಂದೆ ಐಸಿಸ್ ಉಗ್ರವಾದಿಗಳ ಕೈವಾಡವಿದೆ. ಇಬ್ಬರ ಕೈಯಿಂದ ಈ ಹತ್ಯೆ ಮಾಡಲು ಸಾಧ್ಯವಿಲ್ಲ. ಹತ್ಯೆ ಹಿಂದೆ ಉಗ್ರಗಾಮಿಗಳ ಕೈವಾಡವಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.
ಜೈನ ಮುನಿ ಹತ್ಯೆ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಡೆ ಸಂಶಯವಾಗಿದೆ. ಸರ್ಕಾರ ಪ್ರಕರಣದ ಆರೋಪಿಗಳನ್ನು ಮುಚ್ಚಿಡುವ ಪ್ರಯತ್ನ ಮಾಡುತ್ತಿದೆ. ಜೈನಮುನಿ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಸಿದ್ದು ಸವದಿ ಹೇಳಿದ್ದಾರೆ.