ಬೆಂಗಳೂರು : ರಾಜ್ಯದಲ್ಲಿ ಮತ್ತೆ ಐಟಿ ಅಧಿಕಾರಿಗಳು ಫೀಲ್ಡ್ ಗೆ ಇಳಿದಿದ್ದು, ಚಿನ್ನಾಭರಣ ಮಳಿಗೆಗಳ ಮೇಲೆ ದಾಳಿ ನಡೆಸಿ ಶಾಕ್ ನೀಡಿದ್ದಾರೆ.
ಹೌದು, ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಚಿನ್ನದ ಮಳಿಗೆಗಳ ಮೇಲೆ `ಐಟಿ’ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆ ಮಾಡಿದ್ದಾರೆ.
ಕರಾವಳಿ ಭಾಗದ ಉಡುಪಿ, ಕುಂದಾಪುರ, ಕಾರ್ಕಳ, ಪಡುಬಿದ್ರಿ, ಬ್ರಹ್ಮಾವರ, ಪುತ್ತೂರು ಸೇರಿದಂತೆ ಹಲವೆಡೆ ಚಿನ್ನದ ಅಂಗಡಿಗಳ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಅದೇ ರೀತಿ ಬೆಂಗಳೂರು ನಗರದ ಹಲವು ಚಿನ್ನಾಭರಣ ಮಳಿಗೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.ಏಕಕಾಲದಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.