
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 10 ಕ್ಕೂ ಹೆಚ್ಚು ಕಡೆ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವಡೆ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಇಂದು ಬೆಳಗ್ಗೆ 6.30 ರ ಸುಮಾರಿಗೆ ಬೆಂಗಳೂರಿನ ಐಟಿ, ಬಿಟಿ ಸೇರಿದಂತೆ ಖಾಸಗಿ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆನಡೆಸಿದ್ದಾರೆ.
ಕೆಲವು ಖಾಸಗಿ ಕಂಪನಿಗಳು ಆದಾಯ ತೆರಿಗೆ ಪಾವತಿಯಲ್ಲಿ ವಂಚನೆ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.