ಬರೇಲಿ : ಸಂಸತ್ತಿನಲ್ಲಿ ಪ್ಯಾಲೆಸ್ಟೈನ್ ಪರ ಘೋಷಣೆ ಕೂಗುವ ಮೂಲಕ ಸಂವಿಧಾನವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿಗೆ ಕೋರ್ಟ್ ಸಮನ್ಸ್ ನೀಡಿದೆ.
ಸ್ಥಳೀಯ ನ್ಯಾಯಾಲಯವು ವಿಚಾರಣೆಗೆ ಹಾಜರಾಗುವಂತೆ ನಿರ್ದೇಶಿಸಿದೆ.ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನಾಯಕ ಸಂಸತ್ತಿನಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ಯಾಲೆಸ್ಟೈನ್ ಪರವಾಗಿ ಧ್ವನಿ ಎತ್ತಿದ್ದಕ್ಕಾಗಿ ವಕೀಲ ವೀರೇಂದ್ರ ಗುಪ್ತಾ ಅವರು ಓವೈಸಿ ವಿರುದ್ಧ ಅರ್ಜಿ ಸಲ್ಲಿಸಿದ್ದರು.
ಐದು ಬಾರಿ ಸಂಸದರಾಗಿರುವ ಗುಪ್ತಾ ಅವರು ಸಾಂವಿಧಾನಿಕ ಮತ್ತು ಕಾನೂನು ನಂಬಿಕೆಗಳನ್ನು ಉಲ್ಲಂಘಿಸಿದ್ದಾರೆ ಎಂದು ಗುಪ್ತಾ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.
ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸುವ ವೇಳೆ ‘ಜೈ ಪ್ಯಾಲೆಸ್ತೀನ್’ ಎಂದು ಸಂಸದ ಅಸಾದುದ್ದೀನ್ ಓವೈಸಿ ಘೋಷಣೆ ಕೂಗಿದ್ದರು. 18ನೇ ಲೋಕಸಭೆಯ ಸಂಸದರ ಪ್ರಮಾಣ ವಚನ ಸ್ವೀಕಾರ ನಡೆಯುತ್ತಿದ್ದ ವೇಳೆ ತೆಲಂಗಾಣದ ಹೈದರಾಬಾದ್ ಸಂಸದ ಅಸದುದ್ದೀನ್ ಉವೈಸಿ ಪ್ರಮಾಣ ವಚನ ಸ್ವೀಕಾರದ ವೇಳೆ ಜೈ ಪ್ಯಾಲೆಸ್ತೀನ್’ ಎಂದು ಹೇಳಿ ಘೋಷಣೆ ಕೂಗಿದ್ದರು.
Sworn in as member of Lok Sabha for the fifth time. Inshallah I will continue to raise issues of India’s marginalised with sinceritypic.twitter.com/OloVk6D65B
— Asaduddin Owaisi (@asadowaisi) June 25, 2024