ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಸೆ.12 ರವರೆಗೆ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಅಂತ್ಯವಾದ ಹಿನ್ನೆಲೆ ಎಲ್ಲಾ 17 ಆರೋಪಿಗಳನ್ನು ಅವರು ಇರುವ ಜೈಲುಗಳಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದೆ.
ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲ್ ನಲ್ಲಿ ದರ್ಶನ್ ಗೆ ವಿಶೇಷ ಆತಿಥ್ಯ ನೀಡಿದ ವಿಚಾರ ಬಹಿರಂಗಗೊಂಡ ಬೆನ್ನಲ್ಲೇ ಪೊಲೀಸರು ಕೋರ್ಟ್ ಅನುಮತಿ ಪಡೆದು ಆರೋಪಿಗಳನ್ನು ರಾಜ್ಯದ ವಿವಿಧ ಜೈಲುಗಳಿಗೆ ಸ್ಥಳಾಂತರ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಭಾಗಿಯಾಗಿರುವುದು ಧೃಡವಾಗಿದ್ದು, ಚಾರ್ಜ್ ಶೀಟ್ ನಲ್ಲಿ ಸ್ಪೋಟಕ ಮಾಹಿತಿ ಬಯಲಾಗಿದೆ.ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ಕೋರ್ಟ್ ಗೆ ಸಲ್ಲಿಕೆಯಾಗಿದ್ದು, ಪವಿತ್ರಾಗೌಡ ಎ-1 , ದರ್ಶನ್ ಎ-2 ಆರೋಪಿಯೆಂದು ಉಲ್ಲೇಖಿಸಲಾಗಿದೆ. ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಸುಮಾರು 4000 ಪುಟಗಳ ಸುದೀರ್ಘವಾದ ವಿವರಗಳುಳ್ಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.