ಬೆಂಗಳೂರು : ನಟ ದರ್ಶನ್ & ಗ್ಯಾಂಗ್ ಗೆ ಜೈಲೇ ಗತಿ ಆಗಿದ್ದು, ಸೆ.9 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ನಟ ದರ್ಶನ್ & ಗ್ಯಾಂಗ್ ಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿದೆ.
ನಟ ದರ್ಶನ್ ಹಾಗೂ ಗ್ಯಾಂಗ್ ನ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾಗಿತ್ತು.ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಇಂದು ಮಧ್ಯಾಹ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.
ಬಳ್ಳಾರಿ ಜೈಲಿಗೆ ನಟ ದರ್ಶನ್ ಅವರನ್ನು ಶಿಫ್ಟ್ ಮಾಡಲಾಗುವುದು. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಒಪ್ಪಿಗೆ ನೀಡಲಾಗಿದೆ.24ನೇ ಎಸಿಎಂಎಂ ನ್ಯಾಯಾಲಯದಿಂದ ದರ್ಶನ್ ಸ್ಥಳಾಂತರಕ್ಕೆ ಆದೇಶ ನೀಡಲಾಗಿದೆ.
ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿದ ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಜೈಲಿನ 7 ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ನ್ಯಾಯಾಲಯದಿಂದ ಅನುಮತಿ ಸಿಕ್ಕಿದೆ. ಉಳಿದ ಆರೋಪಿಗಳನ್ನು ಬೇರೆ ಜೈಲಿಗೆ ಸ್ಥಳಾಂತರಿಸಲು ಕೂಡ ಕೋರ್ಟ್ ಅನುಮತಿ ನೀಡಿದೆ.