ಬೆಂಗಳೂರು : ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ನಟ ದರ್ಶನ್ ಗೆ ಸರ್ಜಿಕಲ್ ಚೇರ್ ನೀಡಲು ಒಪ್ಪಿಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ನಟ ದರ್ಶನ್ ಗೆ ಬೆನ್ನು ನೋವು ಕಾಣಿಸಿಕೊಂಡ ಹಿನ್ನೆಲೆ ಇಂದು ವೈದ್ಯರು ಜೈಲಿಗೆ ಭೇಟಿ ನೀಡಿ ನಟ ದರ್ಶನ್ ತಪಾಸಣೆ ನಡೆಸಿದ್ದಾರೆ. ವೈದ್ಯರ ತಪಾಸಣೆ ಬಳಿಕ ದರ್ಶನ್ ಗೆ ಸರ್ಜಿಕಲ್ ಚೇರ್ ನೀಡಲು ಒಪ್ಪಿಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ದರ್ಶನ್ ಅವರಿಗೆ ಬೆನ್ನು ಮೂಳೆ (ಎಲ್ -5) ನಲ್ಲಿ ಸಮಸ್ಯೆ ಇರುವ ಬಗ್ಗೆ ಮತ್ತು ಹಿಂದೊಮ್ಮೆ ಆಗಿದ್ದ ಕೈ ಮುರಿತದ ನೋವು ಇನ್ನೂ ಇರುವ ಬಗ್ಗೆ ಕುಟುಂಬಸ್ಥರು ಬಳ್ಳಾರಿ ಕೇಂದ್ರ ಕಾರಾಗೃಹದ ಅಧಿಕಾರಿಗಳಿಗೆ ದಾಖಲೆಗಳನ್ನು ಸಲ್ಲಿಸಿ, ಶೌಚಕ್ಕೆ ‘ಸರ್ಜಿಕಲ್ ಚೇರ್’ ಒದಗಿಸಿಕೊಡುವಂತೆ ಮನವಿ ಮಾಡಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆದ ನಟ ದರ್ಶನ್ ಬೆನ್ನು ನೋವು ಹಾಗೂ ಇತರ ಕೆಲವು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ . ಈ ಬಗ್ಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕೂಡ ಜೈಲಿನ ಅಧಿಕಾರಿಗಳಿಗೆ ದಾಖಲೆ ನೀಡಿದ್ದರು.
ಈ ಹಿನ್ನೆಲೆ ಬಳ್ಳಾರಿ ಸೆಂಟ್ರಲ್ ಜೈಲಿಗೆ ಭೇಟಿ ನೀಡಿ ವೈದ್ಯರು ನಟ ದರ್ಶನ್ ರನ್ನು ತಪಾಸಣೆ ನಡೆಸಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಬಳ್ಳಾರಿ ಸೆಂಟ್ರಲ್ ಜೈಲು ಸೇರಿದ್ದು, ಪತ್ನಿ ವಿಜಯಲಕ್ಷ್ಮೀ ದರ್ಶನ್ ಭೇಟಿಗಾಗಿ ನಿನ್ನೆ ಜೈಲಿಗೆ ಆಗಮಿಸಿದ್ದರು.