ಬೆಂಗಳೂರು : ಮಗುವನ್ನು ಅಕ್ರಮವಾಗಿ ದತ್ತು ಪಡೆದ ಪ್ರಕರಣದಲ್ಲಿ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್ ಗೌಡರನ್ನು ಬಂಧಿಸಲಾಗಿತ್ತು, ಇದೀಗ ಸೋನುಗೌಡಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಪೊಲೀಸ್ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾಗಿದ್ದ ಹಿನ್ನೆಲೆಯಲ್ಲಿ ಸೋನು ಗೌಡ ಅವರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಬೆಂಗಳೂರಿನ ಸಿಜೆಎಂ ನ್ಯಾಯಾಲಯ ಸೋನು ಗೌಡಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.
ಚೈಲ್ಡ್ ವೇಲ್ ಫೇರ್ ಕಮಿಟಿ ಅಧಿಕಾರಿಗಳು ಬ್ಯಾಡರಹಳ್ಳಿ ದೂರು ನೀಡಿದ ದೂರಿನ ಹಿನ್ನೆಲೆ ಅಂದ್ರಹಳ್ಳಿ ನಿವಾಸದಲ್ಲಿ ಸೋನುಗೌಡ ಅವರನ್ನು ಪೊಲೀಸರು ಬಂಧಿಸಿದ್ದರು. ಉತ್ತರ ಕರ್ನಾಟಕ ಮೂಲದ ಎಂಟು ವರ್ಷದ ಬಾಲಕಿಯನ್ನು ದತ್ತು ಪಡೆದಿರುವುದಾಗಿ ಸೋನು ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡಿದ್ದರು. ಸೋನುಗೌಡ ಅವರು ಮಗುವನ್ನು ದತ್ತು ಪಡೆಯಲು ಅನುಸರಿಬೇಕಾದ ಕಾನೂನಾತ್ಮಕ ಪ್ರಕ್ರಿಯೆಗಳನ್ನು ಸರಿಯಾಗಿ ಮಾಡಿಲ್ಲ ಎಂಬ ಆರೋಪ ಕೇಳಿಬಂದಿದೆ.ಈ ಹಿನ್ನೆಲೆ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್ ಗೌಡ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಸೋನು ಗೌಡರನ್ನು ಬಂಧಿಸಲಾಗಿತ್ತು. ನಂತರ ಸೋನು ಗೌಡರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು ವಿಚಾರಣೆ ನಡೆಸಿದ ಕೋರ್ಟ್ ಹೆಚ್ಚಿನ ವಿಚಾರಣೆಗಾಗಿ 4 ದಿನ ಪೊಲೀಸ್ ಕಸ್ಟಡಿ ವಶಕ್ಕೆ ನೀಡಿ ಆದೇಶ ಹೊರಡಿಸಿತ್ತು, ಇದೀಗ ಸೋನುಗೌಡಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಸ್ಥಳ ಮಹಜರು
ಮಗು ದತ್ತು ಪ್ರಕರಣದಲ್ಲಿ ಸಿಲುಕಿಹಾಕಿಕೊಂಡಿರುವ ರೀಲ್ಸ್ ಸ್ಟಾರ್ ಮಾಜಿ ಬಿಗ್ ಬಾಸ್ ಸ್ಪರ್ಧಿ ಸೋನು ಗೌಡ ಅವರನ್ನು ಸ್ಥಳ ಮಹಜರು ಮಾಡಲು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಕಾಚಾಪುರ ಗ್ರಾಮದಕ್ಕೆ ಕರೆದೊಯ್ಯಲಾಗಿದ್ದು, ದತ್ತು ವಿಚಾರ ತಿಳಿದು ಗ್ರಾಮಸ್ಥರು ರೊಚ್ಚಿಗೆದ್ದ ಘಟನೆ ಕೂಡ ನಡೆದಿದೆ. ದತ್ತು ಪ್ರಕರಣ ವಿಚಾರ ತಿಳಿಯುತ್ತಲೇ ಕೊಪಗೊಂಡ ಗ್ರಾಮಸ್ಥರು ಸೋನುಗೌಡಳನ್ನ ಹಿಡಿದು ಕಟ್ಟಿ ಹಾಕಲು ಮುಂದಾದರು. ಜನ ರೊಚ್ಚಿಗೇಳುತ್ತಿದ್ದಂತೆಯೇ ಬ್ಯಾಡರಹಳ್ಳಿ ಪೊಲೀಸರು ಅಲ್ಲಿಂದ ಕರೆದೊಯ್ದರು.