ಬೆಂಗಳೂರು : ಮಗುವನ್ನು ಅಕ್ರಮವಾಗಿ ದತ್ತು ಪಡೆದ ಪ್ರಕರಣದಲ್ಲಿ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್ ಗೌಡರನ್ನು ಬಂಧಿಸಲಾಗಿತ್ತು, ಇದೀಗ ವಿಚಾರಣೆ ಅಗತ್ಯವಿರುವ ಹಿನ್ನೆಲೆ ಸೋನುಗೌಡರನ್ನು 4 ದಿನ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರಿನ ಸಿಜಿಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ಚೈಲ್ಡ್ ವೇಲ್ ಫೇರ್ ಕಮಿಟಿ ಅಧಿಕಾರಿಗಳು ಬ್ಯಾಡರಹಳ್ಳಿ ದೂರು ನೀಡಿದ ದೂರಿನ ಹಿನ್ನೆಲೆ ಅಂದ್ರಹಳ್ಳಿ ನಿವಾಸದಲ್ಲಿ ಇಂದು ಬೆಳಗ್ಗೆ ಸೋನುಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಕರ್ನಾಟಕ ಮೂಲದ ಎಂಟು ವರ್ಷದ ಬಾಲಕಿಯನ್ನು ದತ್ತು ಪಡೆದಿರುವುದಾಗಿ ಸೋನು ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡಿದ್ದರು. ಸೋನುಗೌಡ ಅವರು ಮಗುವನ್ನು ದತ್ತು ಪಡೆಯಲು ಅನುಸರಿಬೇಕಾದ ಕಾನೂನಾತ್ಮಕ ಪ್ರಕ್ರಿಯೆಗಳನ್ನು ಸರಿಯಾಗಿ ಮಾಡಿಲ್ಲ ಎಂಬ ಆರೋಪ ಕೇಳಿಬಂದಿದೆ.ಈ ಹಿನ್ನೆಲೆ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್ ಗೌಡ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಸೋನು ಗೌಡರನ್ನು ಬಂಧಿಸಲಾಗಿತ್ತು.
ನಂತರ ಸೋನು ಗೌಡರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು ವಿಚಾರಣೆ ನಡೆಸಿದ ಕೋರ್ಟ್ ಹೆಚ್ಚಿನ ವಿಚಾರಣೆಗಾಗಿ 4 ದಿನ ಪೊಲೀಸ್ ಕಸ್ಟಡಿ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.