ಬೆಳಗಾವಿ : ಆಪ್ತರಿಂದಲೇ ಹತ್ಯೆಗೀಡಾದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಅಂತ್ಯಕ್ರಿಯೆ ಕೆಲವೇ ಕ್ಷಣಗಳಲ್ಲಿ ನಡೆಯಲಿದೆ.
ಹಿರೇಕೋಡಿಗೆ ಗ್ರಾಮದ ನಂದಿಪರ್ವತ ಆಶ್ರಮದ ಪಕ್ಕದ ಜಮೀನಿನಲ್ಲಿ ಜೈನ ಸಂಪ್ರದಾಯದಂತೆ ಜೈನ ಮಠಗಳ ಮಹಾಸ್ವಾಮಿಗಳ ನೇತೃತ್ವದಲ್ಲಿ ಜೈನಮುನಿ ಸ್ವಾಮೀಜಿಗಳ ಅಂತ್ಯ ಸಂಸ್ಕಾರ ನಡೆಯಲಿದೆ.
ಜೈನ ಮುನಿ ಹತ್ಯೆ ಪ್ರಕರಣ ಸಂಬಂಧ ರಾಯಬಾಗ ತಾಲೂಕಿನ ಕಾಟಕಬಾವಿ ಗ್ರಾಮದ ನಾರಾಯಣ ಮಾಳಿ, ಹಸನ್ ಡಾಲಾಯತ್ ಎಂಬುವರನ್ನು ಬಂಧಿಸಲಾಗಿದೆ. ಪ್ರಕರಣ ದಾಖಲಾಗಿ 4 ಗಂಟೆಗೊಳಗಾಗಿ ಇಬ್ಬರುಉ ಆರಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ.