ಬೆಂಗಳೂರು : ತೀವ್ರ ವಿರೋಧದ ನಡುವೆಯೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ವರದಿ ಸಲ್ಲಿಸಿದ್ದಾರೆ.
ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಜಯಪ್ರಕಾಶ್ ಹೆಗ್ಡೆ ಅವರಿಂದ ಜಾತಿ ವರದಿ ಸ್ವೀಕಾರ ಮಾಡಿದ್ದಾರೆ.
ಜಾತಿ ಗಣತಿ ವರದಿ ಸ್ವೀಕರಿಸಿದ ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದ್ದೇನೆ, ಇದನ್ನು ಸಚಿವ ಸಂಪುಟದ ಮುಂದಿಟ್ಟು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಈ ಹಿಂದೆ ಕಾಂತರಾಜ್ ಅಧ್ಯಕ್ಷರಾಗಿದ್ದ ದತ್ತಾಂಶದ ಆಧಾರದ ಮೇಲೆ ವರದಿ ನೀಡುವಂತೆ ಸರ್ಕಾರ ಹೇಳಿದ್ದು, ಅದರಂತೆ ವರದಿ ಸಿದ್ದಪಡಿಸಲಾಗಿದೆ. 2015 -16ರಲ್ಲಿ ಕಾಂತರಾಜು ಸಮಿತಿ ನಡೆಸಿದ್ದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಆಧಿರಿಸಿ ಸಿದ್ಧಪಡಿಸಿದ ವರದಿ ಸಲ್ಲಿಸಲಾಗುವುದು ಎಂದು ಜಯಪ್ರಕಾಶ್ ಹೆ ಹೇಳಿದ್ದರು. ರಾಜ್ಯದಲ್ಲಿ ಮನೆ ಮನೆಗೆ ಪ್ರತಿ ಕುಟುಂಬ ಸದಸ್ಯರು, ಉದ್ಯೋಗ, ಜಾತಿ, ಶಿಕ್ಷಣ, ಆಸ್ತಿ ಸೇರಿ 54 ಪ್ರಶ್ನೆಗಳನ್ನು ಕೇಳಿದ ಅಂಕಿ ಅಂಶ ಸಂಗ್ರಹಿಸಲಾಗಿತ್ತು. ಈ ವರದಿ ಆಧಾರದ ಮೇಲೆ ಜನರಿಗೆ ಮುಂದಿನ ದಿನಗಳಲ್ಲಿ ಅಗತ್ಯ ಸೌಕರ್ಯ ನೀಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದರು.