ಬೆಂಗಳೂರು : ಜೂನ್. 8 ರಂದು ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಪ್ರಧಾನಿ ಮೋದಿ ಪದಗ್ರಹಣದ ಸಮಾರಂಭದ ವೇಳೆಯೇ ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರಸ್ವಾಮಿ ಅವರು ಕೂಡ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ. ಅವರಿಗೆ ಕೃಷಿ ಖಾತೆಯ ಮೇಲೆ ಒಲವಿದ್ದು, ಕೃಷಿ ಖಾತೆ ಹೆಚ್ಡಿಕೆಗೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಜೂ.8 ರಂದು 3 ನೇ ಬಾರಿಗೆ ದೇಶದ ಪ್ರಧಾನಿಯಾಗಿ ‘ನರೇಂದ್ರ ಮೋದಿ’ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ.3 ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತೆ ಅಧಿಕಾರದ ಗದ್ದುಗೆ ಏರಲಿದ್ದಾರೆ. ಜೂ.8 ರಂದು ಸಂಜೆ ದೆಹಲಿಯಲ್ಲಿ ನರೇಂದ್ರ ಮೋದಿ’ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ಮಾಹಿತಿ ನೀಡಿದೆ.
ಜೂನ್ 8 ರಂದು ರಾತ್ರಿ 8 ಗಂಟೆಗೆ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನೆರೆ ರಾಷ್ಟ್ರದ ಗಣ್ಯರಿಗೆ ಆಹ್ವಾನ ನೀಡಲಿದ್ದಾರೆ.ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಇತರ ವಿದೇಶಿ ಗಣ್ಯರೊಂದಿಗೆ ಸೇರಲಿದ್ದಾರೆ.ಲೋಕಸಭೆ ಚುನಾವಣೆ ಫಲಿತಾಂಶ 2024 ಪ್ರಕಟಗೊಂಡಿದ್ದು, ಫಲಿತಾಂಶದಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ದೊರೆತಿಲ್ಲ.