ಬೆಂಗಳೂರು: ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಗೆ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ದಿಢೀರ್ ಭೇಟಿ ನೀಡಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆಗೆ ಭೇಟಿ ನೀಡಿರುವ ಸಚಿವ ದಿನೇಶ್ ಗುಂಡೂರಾವ್, ಆಸ್ಪತ್ರೆಯಲ್ಲಿ ಪರಿಶೀಲನೆ ನಡೆಸಿದರು.
ಆಸ್ಪತ್ರೆಯಲ್ಲಿ ಟ್ರಾಮ ಕೇರ್ ಸೆಂಟರ್ ಸ್ಥಾಪನೆ ಸಂಬಂಧ ಸ್ಥಳ ಪರಿಶೀಲನೆ ನಡೆಸಿ, ವೈದ್ಯರ ಜೊತೆ ಚರ್ಚೆ ನಡೆಸಿದರು.