ಬೆಂಗಳೂರು : ರಾಜ್ಯಾದ್ಯಂತ ಕರ್ನಾಟಕ ಬಂದ್ ಯಶಸ್ವಿಯಾಗಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ‘ಕರ್ನಾಟಕ ಬಂದ್’ ಯಶಸ್ವಿಯಾಗಿದೆ. ಎಲ್ಲಾ ಕಡೆ ಬಸ್ ನಿಲ್ದಾಣ, ರಸ್ತೆಗಳು ಖಾಲಿ ಖಾಲಿ ಆಗಿದೆ. ಎಲ್ಲಾ ಸಂಘಟನೆಗಳು ಬೆಂಬಲ ನೀಡಿದೆ. ಒಟ್ಟಾರೆ ಕರೆ ನೀಡಿದ ಬಂದ್ ಯಶಸ್ವಿಯಾಗಿದೆ ಎಂದಿದ್ದಾರೆ.
ಪೊಲೀಸರು ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡಿದ್ದಾರೆ. ಸಿಕ್ಕ ಸಿಕ್ಕವರಿಗೆ ನೋಟಿಸ್ ಕೊಟ್ಟಿದ್ದಾರೆ. ಸುಮಾರು 3000 ಹೆಚ್ಚು ಮಂದಿ ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ. ನನಗೂ ಒಂದು ನೋಟಿಸ್ ಕೊಟ್ಟಿದ್ದಾರೆ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.
ಕನ್ನಡಿಗರ ಮೇಲೆ ಹಲ್ಲೆ, ದೌರ್ಜನ್ಯ, ಮರಾಠಿ ಪುಂಡರಿಂದ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಹಾಗೂ ಮೇಕೆದಾಟು ಸೇರಿದಂತೆ ಹಲವು ನೀರಾವರಿ ಯೋಜನೆ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆ ಹೋರಾಟಗಾರ ವಾಟಾಳ್ ನಾಗರಾಜ್ ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.