ಬೆಂಗಳೂರು : ಕರ್ನಾಟಕ ಬಂದ್ ಹಿನ್ನೆಲೆ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಇಂದು ‘ಮಾರ್ನಿಂಗ್ ಶೋ’ ಬಂದ್ ಆಗಿದೆ.
ಚಲನಚಿತ್ರ ವಾಣಿಜ್ಯ ಮಂಡಳಿ ಎಲ್ಲಾ ಥಿಯೇಟರ್ ಗಳಿಗೂ ಸುತ್ತೋಲೆ ನೀಡಿದ್ದು, ಬೆಳಗ್ಗಿನ ಚಿತ್ರಪ್ರದರ್ಶನ ಬಂದ್ ಮಾಡುವಂತೆ ಸೂಚನೆ ನೀಡಿದೆ. ಈ ಮೂಲಕ ಚಲನಚಿತ್ರ ವಾಣಿಜ್ಯ ಮಂಡಳಿ ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸಿದೆ. ಮಧ್ಯಾಹ್ನದ ನಂತರ ಎಂದಿನಂತೆ ಸಿನಿಮಾ ಪ್ರದರ್ಶನವಾಗಲಿದೆ.
ಕನ್ನಡಿಗರ ಮೇಲೆ ಹಲ್ಲೆ, ದೌರ್ಜನ್ಯ, ಮರಾಠಿ ಪುಂಡರಿಂದ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಹಾಗೂ ಮೇಕೆದಾಟು ಸೇರಿದಂತೆ ಹಲವು ನೀರಾವರಿ ಯೋಜನೆ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆ ಹೋರಾಟಗಾರ ವಾಟಾಳ್ ನಾಗರಾಜ್ ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ. ಕರ್ನಾಟಕ ಬಂದ್ ಗೆ ಕೆಲ ಸಂಘಟನೆಗಳು ಬೆಂಬಲ ಘೋಷಿಸಿದ್ದರೆ, ಇನ್ನು ಕೆಲ ಸಂಘಟನೆಗಳು ನೈತಿಕ ಬೆಂಬಲ ಮಾತ್ರ ಘೋಷಿಸಿಸಿದ್ದಾರೆ. ಬಂದ್ ಮಾಡಲ್ಲ ಎಂದಿದ್ದಾರೆ.