ಬೆಂಗಳೂರು : ರಾಜ್ಯ ಸರ್ಕಾರ 2023ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದೆ.ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 68 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿಗಳಿಗೆ ಪ್ರತಿ ವರ್ಷವು ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವ ಸಂಪುದಾಯವನ್ನು ಸರ್ಕಾರವು ಅನುಸರಿಸಿಕೊಂಡು ಬಂದಿರುತ್ತದೆ. ಅದರಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ 2023ನೇ ಸಾಲಿನಲ್ಲಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲು ಸರ್ಕಾರವು ನಿರ್ಧರಿಸಿ ಆದೇಶ ಹೊರಡಿಸಿದೆ.
ಈ ಬಾರಿ ಜಾನಪದ ಕ್ಷೇತ್ರದಲ್ಲಿ 9 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಸಮಾಜಸೇವೆ ಕ್ಷೇತ್ರದಲ್ಲಿ 5 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ. ಜಾನಪದ ಕ್ಷೇತ್ರದಲ್ಲಿ ಹುಸೇನಾಬಿ ಬುಡೆನ್ ಸಾಬ್ ಸಿದ್ಧಿ, ಶಿವಂಗಿ ಶಣ್ಮರಿ, ಮಹದೇವು, ನರಸಪ್ಪಾ, , ವಿಭೂತಿ ಗುಂಡಪ್ಪ, ಶಕುಂತಲಾ ದೇವಲಾನಾಯಕ, ಚೌಡಮ್ಮ, ಹೆಚ್.ಕೆ.ಕಾರಮಂಚಪ್ಪ ಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಸಮಾಜಸೇವೆ ಕ್ಷೇತ್ರದಲ್ಲಿ 5 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ. ಹುಚ್ಚಮ್ಮ ಬಸಪ್ಪ ಚೌದ್ರಿ, ಚಾರ್ಮಾಡಿ ಹಸನಬ್ಬ, ಕೆ.ರೂಪಾ ನಾಯಕ್, ನಿಜಗುಣಾನಂದ ಸ್ವಾಮೀಜಿ, ಜಿ.ನಾಗರಾಜು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆಡಳಿತ ಕ್ಷೇತ್ರದಲ್ಲಿ ಜಿ.ವಿ.ಬಲರಾಮ್ಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದೆ.
ಹೀಗಿದೆ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿವಿಧ ಕ್ಷೇತ್ರಗಳ ಸಾಧಕರ ಪಟ್ಟಿ