ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿವಿಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಜ.23 ರಂದು ನಡೆದ ಕರ್ನಾಟಕ ರಾಜ್ಯ ಕಾನೂನು ವಿವಿಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದಿತ್ತು, ಇದರಲ್ಲಿ ಕೆಲವು ವಿದ್ಯಾರ್ಥಿಗಳೇ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಚೇರ್ಮನ್ ಡಾ.ವಿಶ್ವನಾಥ್ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದರು. ಸದ್ಯ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸೈಬರ್ ಕ್ರೈಮ್ ಪೊಲೀಸ್ ಠಾಣೆಯು ವಿಶ್ವವಿದ್ಯಾಲಯದ ಕಾನೂನು ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಯಶಸ್ವಿಯಾಗಿ ಪತ್ತೆ ಹಚ್ಚಿ, ಮೂವರ ಬಂಧನಕ್ಕೆ ಕಾರಣವಾಗಿದೆ.ಆರೋಪಿಗಳು ದಿನಾಂಕ 23/01/2025 ರಂದು ನಡೆಯಲಿದ್ದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಎಲ್ಎಲ್ಬಿ ಕಾಂಟ್ರಾಕ್ಟ್ ಲಾ-1 ಪ್ರಶ್ನೆ ಪತ್ರಿಕೆಯನ್ನು ಟೆಲಿಗ್ರಾಮ್ ಮತ್ತು ವಾಟ್ಸಾಪ್ ಗುಂಪುಗಳಲ್ಲಿ ಹಂಚಿಕೊಂಡಿದ್ದಾರೆ. ಬೆಂಗಳೂರು ನಗರ ಪೊಲೀಸರು ಇಂತಹ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದಂತೆ ಎಚ್ಚರಿಕೆ ನೀಡಿದ್ದು, ಅಪರಾಧಿಗಳೆಂದು ಕಂಡುಬಂದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬಿ.ದಯಾನಂದ್ ಒತ್ತಿ ಹೇಳಿದ್ದಾರೆ.
ಜ.23 ರಂದು ನಡೆದ ಕರ್ನಾಟಕ ರಾಜ್ಯ ಕಾನೂನು ವಿವಿಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದಿದ್ದು, ಪರೀಕ್ಷೆಗೂ ಮೊದಲೇ ವಾಟ್ಸಾಪ್ ನಲ್ಲಿ ಪ್ರಶ್ನೆ ಪತ್ರಿಕೆಗಳು ಹರಿದಾಡಿತ್ತು, ಈ ಸಂಬಂಧ ಚೇರ್ಮನ್ ಡಾ.ವಿಶ್ವನಾಥ್ ದೂರು ನೀಡಿದ್ದರು.