ನವದೆಹಲಿ : ಜನವರಿ 26 ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವಕ್ಕೆ ಕರ್ನಾಟಕದ ‘ಬ್ರ್ಯಾಂಡ್ ಬೆಂಗಳೂರು’ ಸ್ತಬ್ಧಚಿತ್ರ ಆಯ್ಕೆಯಾಗಿದೆ.
ದೇಶದ ವಿವಿಧ ರಾಜ್ಯಗಳ ಟ್ಯಾಬ್ಲೋಗಳು ಗಣರಾಜ್ಯೋತ್ಸವದಲ್ಲಿ ಭಾಗಿಯಾಗಲಿದ್ದು, ಕರ್ನಾಟಕದಿಂದ ಬ್ರ್ಯಾಂಡ್ ಬೆಂಗಳೂರು ಸ್ತಬ್ದಚಿತ್ರ ಆಯ್ಕೆಯಾಗಿದೆ.
ಬ್ರ್ಯಾಂಡ್ ಬೆಂಗಳೂರು ಬಿಂಬಿಸುವ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಯ್ಕೆ ಸಮಿತಿ ಕೂಡ ಒಪ್ಪಿಗೆ ನೀಡಿದೆ ಎನ್ನಲಾಗಿದೆ, ಗಣರಾಜ್ಯೋತ್ಸವಕ್ಕೆ ರಾಜ್ಯದ ಬ್ರ್ಯಾಂಡ್ ಬೆಂಗಳೂರು’ ಸ್ತಬ್ಧಚಿತ್ರ ಆಯ್ಕೆಯಾದರೂ ಪರೇಡ್ನಲ್ಲಿ ಸಾಗುವುದು ಅನುಮಾನ ಎಂದು ಹೇಳಲಾಗಿದೆ. ಕೆಂಪುಕೋಟೆ ಆವರಣದಲ್ಲಿ ಕೇವಲ ಪ್ರದರ್ಶನಕ್ಕೆ ಮಾತ್ರ ಸೀಮಿತವಾಗಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ.
ಈ ಬಾರಿಯ 75 ನೇ ಗಣರಾಜ್ಯೋತ್ಸವವನ್ನು ಜ. 26 ರಂದು ರಾಷ್ಟ್ರರಾಜಧಾನಿಯ ರಾಜಪಥದಲ್ಲಿ ಬೃಹತ್ ಮತ್ತು ಪ್ರಭಾವಶಾಲಿ ಮೆರವಣಿಗೆಯೊಂದಿಗೆ ಆಚರಿಸಲಾಗುತ್ತಿದೆ.