ನವದೆಹಲಿ : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸೆ.21 ಕ್ಕೆ ವಿಚಾರಣೆ ಮುಂದೂಡಿದೆ.
ಕರ್ನಾಟಕ ಕಾವೇರಿ ನೀರನ್ನು ಸಮರ್ಪಕವಾಗಿ ಹರಿಸುತ್ತಿಲ್ಲ ಎಂದು ಆರೋಪಿಸಿ ತಮಿಳುನಾಡು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇಂದು ಈ ಅರ್ಜಿ ವಿಚಾರಣೆ ನಡೆಯಲಿದೆ ಎನ್ನಲಾಗಿತ್ತು, ಆದರೆ ಇಂದಿನ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸುಪ್ರೀಂಕೋರ್ಟ್ ಸೆ.21 ಕ್ಕೆ ವಿಚಾರಣೆ ಮುಂದೂಡಿದೆ.
ಜೂನ್, ಜುಲೈ, ಆಗಸ್ಟ್ ತಿಂಗಳ 80 ಟಿಎಂಸಿ ನೀರು ಬಿಟ್ಟಿಲ್ಲ ಎಂದು ತಮಿಳುನಾಡು ಅರ್ಜಿ ಸಲ್ಲಿಸಿದೆ. ಇನ್ನೂ ಕರ್ನಾಟಕ ಕೂಡ ಈ ಬಗ್ಗೆ ದಾವೆ ಹೂಡಿದೆ. ಕೆಆರ್ಎಸ್, ಕಬಿನಿ, ಹೇಮಾವತಿ, ಹಾರಂಗಿ ಡ್ಯಾಂಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ನೀರು ತುಂಬಿಲ್ಲ. . ತಮಿಳುನಾಡು ಹೇಳುವಷ್ಟು ನೀರು ಬಿಟ್ಟರೆ ಇಲ್ಲಿನ ಜನರಿಗೆ ಕುಡಿಯೋಕು ನೀರಿಲ್ಲ, ಬಹಳ ಸಮಸ್ಯೆ ಆಗುತ್ತೆ ಎಂದು ಕರ್ನಾಟಕ ಉಲ್ಲೇಖಿಸಿದೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದೆ. ತಕ್ಷಣ ಸರ್ಕಾರ ಕೆ.ಆರ್.ಎಸ್ ನಿಂದ ತಮಿಳುನಾಡಿಗೆ ಬಿಡುತ್ತಿರುವ ನೀರನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ಇನ್ನಷ್ಟು ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.