ನವದೆಹಲಿ : ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಭಾರತ್ ರಾಷ್ಟ್ರೀಯ ಸಮಿತಿ (ಬಿಆರ್ಎಸ್) ನಾಯಕಿ ಹಾಗೂ ಕೆಸಿಆರ್ ಪುತ್ರಿ ಕೆ ಕವಿತಾ ನ್ಯಾಯಾಂಗ ಬಂಧನವನ್ನು ಏ.23 ರವರೆಗೆ ವಿಸ್ತರಿಸಲಾಗಿದೆ.
ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಬುಧವಾರ ಆದೇಶ ಹೊರಡಿಸಿದ್ದು, ಏ.23 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಮಾರ್ಚ್ 15, 2024 ರಂದು ಜಾರಿ ನಿರ್ದೇಶನಾಲಯವು ಅವರನ್ನು ಬಂಧಿಸಿತ್ತು.