ಕಲಬುರಗಿ : ಪರೀಕ್ಷಾ ಅಕ್ರಮಗಳ ಕಿಂಗ್ ಪಿನ್ ಆರ್ ಡಿ ಪಾಟೀಲ್ ( R.D Patil ) ಜಾಮೀನು ಅರ್ಜಿ ತಿರಸ್ಕಾರವಾಗಿದೆ.
ಪರೀಕ್ಷಾ ಅಕ್ರಮಗಳ ಕಿಂಗ್ ಪಿನ್ R.D ಪಾಟೀಲ್ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಹೌದು, ಕಲಬುರಗಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ‘3 ಕೇಸ್ಗಳಲ್ಲೂ ಆರ್.ಡಿ.ಪಾಟೀಲ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಅಫಜಲಪುರ, ವಿವಿ ಠಾಣೆ, ಅಶೋಕನಗರ ಠಾಣೆಯಲ್ಲಿ ದಾಖಲಾಗಿದ್ದ 3 ಕೇಸ್ ಗಳಲ್ಲೂ ಜಾಮೀನು ಅರ್ಜಿ ತಿರಸ್ಕರಿಸಿ ಕಲಬುರಗಿ 1 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ.
ಕೆಇಎ ಪರೀಕ್ಷಾ ಅಕ್ರಮ ಪ್ರಕರಣದ ಕಿಂಗ್ ಪಿನ್ ಆರ್ ಡಿ ಪಾಟೀಲ್ ಪೊಲೀಸರಿಂದ ತಪ್ಪಿಸಿಕೊಂಡಿದ್ದನು. ಆರ್ ಡಿ ಪಾಟೀಲ್ ನನ್ನು ಬಂಧಿಸಲು ಹೋದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಕಾಂಪೌಂಡ್ ಹಾರಿ ಎಸ್ಕೇಪ್ ಆಗಿದ್ದಾನೆ. ಈ ದೃಶ್ಯಗಳು ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಲಬುರಗಿಯ ಅಪಾರ್ಟ್ಮೆಂಟ್ನಲ್ಲಿಯೇ ಕಿಂಗ್ಪಿನ್ ವಾಸವಿದ್ದನು ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಆತನನ್ನು ಬಂಧಿಸಲು ಹೋದಾಗ ಆತ ಕಾಂಪೌಂಡ್ ನಿಂದ ಹಾರಿ ಎಸ್ಕೇಪ್ ಆಗಿದ್ದನು.
ಕಲ್ಬುರ್ಗಿಯಲ್ಲಿ ಹಾಗೂ ಯಾದಗಿರಿಯಲ್ಲಿ ಪರೀಕ್ಷೆ ಬರೆಯುವಾಗ ಅಕ್ರಮ ಎಸಗಿದ್ದ ಹಿನ್ನೆಲೆಯಲ್ಲಿ ಯಾದಗಿರಿಯಲ್ಲಿ 16 ಜನರನ್ನು ಬಂಧಿಸಲಾಗಿತ್ತು. ಪರೀಕ್ಷೆ ಬರೆಯುತ್ತಿದ್ದ ವೇಳೆ ಬ್ಲೂಟೂತ್ ಬಳಸಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ಅಭ್ಯರ್ಥಿಗಳನ್ನು ಬಂಧಿಸಿದ್ದರು.