ಬೆಂಗಳೂರು : ಕೆಇಎ ಪರೀಕ್ಷಾ ಹಗರಣದ ಕಿಂಗ್ ಪಿನ್ ಆರ್ ಡಿ ಪಾಟೀಲ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಅಫಜಲಪುರ-ಮಹಾರಾಷ್ಟ್ರ ಗಡಿಯಲ್ಲಿ ರುದ್ರಗೌಡ ಪಾಟೀಲ್ ನನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನೂ, ಕೆಇಎ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಡಿ ಪಾಟೀಲ್ ಜಾಮೀನು ಅರ್ಜಿ ವಿಚಾರಣೆ ನ.16 ಕ್ಕೆ ಮುಂದೂಡಿಕೆಯಾಗಿದೆ. ತಲೆಮರೆಸಿಕೊಂಡೇ ಈತ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ಕೋರ್ಟ್ ನವೆಂಬರ್ 16 ಕ್ಕೆ ಮುಂದೂಡಿದೆ.
ಹಾಗೂ ಪರೀಕ್ಷಾ ಅಕ್ರಮದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಗೆ ರಕ್ಷಣೆ ನೀಡಿದ್ದ ಆರೋಪದಲ್ಲಿ ಫ್ಲಾಟ್ ಮಾಲೀಕ ಹಾಗೂ ಮ್ಯಾನೇಜರ್ ಹಾಪುರದ ಶಂಕರ ಗೌಡಯಾಳವಾರ್ ಹಾಗೂ ದಿಲೀಪ್ ಪವಾರ್ ನನ್ನು ಬಂಧಿಸಲಾಗಿದೆ . ಅದೇ ರೀತಿ ಪಾಟೀಲ್ ಸಹಚರ ಶಿವಕುಮಾರ್ ನನ್ನು ಕೂಡ ಬಂಧಿಸಲಾಗಿತ್ತು.
ಆರ್ ಡಿ ಪಾಟೀಲ್ ನನ್ನು ಬಂಧಿಸಲು ಹೋದ ಪೊಲೀಸರಿಗೆ ಈತ ಚಳ್ಳೆಹಣ್ಣು ತಿನ್ನಿಸಿ ಕಾಂಪೌಂಡ್ ಹಾರಿ ಎಸ್ಕೇಪ್ ಆಗಿದ್ದನು. ಈ ದೃಶ್ಯಗಳು ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಕಲಬುರಗಿಯ ಅಪಾರ್ಟ್ಮೆಂಟ್ನಲ್ಲಿಯೇ ಕಿಂಗ್ಪಿನ್ ವಾಸವಿದ್ದನು ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಆತನನ್ನು ಬಂಧಿಸಲು ಹೋದಾಗ ಆತ ಕಾಂಪೌಂಡ್ ನಿಂದ ಹಾರಿ ಎಸ್ಕೇಪ್ ಆಗಿದ್ದನು.
ಕಲ್ಬುರ್ಗಿಯಲ್ಲಿ ಹಾಗೂ ಯಾದಗಿರಿಯಲ್ಲಿ ಪರೀಕ್ಷೆ ಬರೆಯುವಾಗ ಅಕ್ರಮ ಎಸಗಿದ್ದ ಹಿನ್ನೆಲೆಯಲ್ಲಿ ಯಾದಗಿರಿಯಲ್ಲಿ 16 ಜನರನ್ನು ಬಂಧಿಸಲಾಗಿತ್ತು. ಪರೀಕ್ಷೆ ಬರೆಯುತ್ತಿದ್ದ ವೇಳೆ ಬ್ಲೂಟೂತ್ ಬಳಸಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ಅಭ್ಯರ್ಥಿಗಳನ್ನು ಬಂಧಿಸಿದ್ದರು. ಪ್ರಕರಣದ ಕಿಂಗ್ ಪಿನ್ ಆರ್ ಡಿ ಪಾಟೀಲ್ ಆಗಿದ್ದು, ಸದ್ಯ ಈತನನ್ನು ಪೊಲೀಸರು ಬಂಧಿಸಿದ್ದಾರೆ.