alex Certify BREAKING : ಕಿಚ್ಚನ ಹುಟ್ಟು ಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ : ಹೊಸ ಸಿನಿಮಾ ಘೋಷಣೆ ಮಾಡಿದ ನಟ ಸುದೀಪ್ |Video | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕಿಚ್ಚನ ಹುಟ್ಟು ಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ : ಹೊಸ ಸಿನಿಮಾ ಘೋಷಣೆ ಮಾಡಿದ ನಟ ಸುದೀಪ್ |Video

ಬೆಂಗಳೂರು : ಹುಟ್ಟು ಹಬ್ಬದ ದಿನವೇ ನಟ ಕಿಚ್ಚ ಸುದೀಪ್ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ.
ಹೌದು, ನಟ ಸುದೀಪ್ ‘ಬಿಲ್ಲಾ ರಂಗಾ ಭಾಷಾ ಸಿನಿಮಾ’ ಘೋಷಣೆ ಮಾಡಿದ್ದು, ಅಭಿಮಾನಿಗಳಲ್ಲಿ ಬಹಳ ಕುತೂಹಲ ಮೂಡಿದೆ.

ಬಿಲ್ಲಾ ರಂಗ ಭಾಷಾ ಸಿನಿಮಾದ ಟೈಟಲ್ ಲೋಗೋ ಮತ್ತು ಪರಿಕಲ್ಪನೆಯ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ನಟ ಸುದೀಪ್ ಹಂಚಿಕೊಂಡಿದ್ದಾರೆ.

ವಿಕ್ರಾಂತ್ ರೋಣ ನಿರ್ದೇಶಕರಿಂದ ಬಿಲ್ಲಾ ರಂಗ ಭಾಷಾ ಸಿನಿಮಾ ತಯಾರಾಗುತ್ತಿದೆ. ಒಂದಾನೊಂದು ಕಾಲದಲ್ಲಿ ಕ್ರಿ.ಶಕ 2209ರಲ್ಲಿ ಎಂದು ಆರಂಭವಾಗುವ ವಿಡಿಯೋದಲ್ಲಿ ಬಿಲ್ಲಾ ರಂಗ ಭಾಷಾ ಎಂಬ ಮೂವರ ಕಥೆಯ ಬಗ್ಗೆ ವಿಡಿಯೋದಲ್ಲಿ ಮಾಹಿತಿ ನೀಡಲಾಗಿದೆ. ಈ ಸಿನಿಮಾಗೆ ಅನೂಪ್ ಬಂಡಾರಿ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದು, ಸಿನಿಮಾ ಯಾವ ಲೆವೆಲ್ ಗೆ ಸದ್ದು ಮಾಡುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಇಂದು ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.

ಮ್ಯಾಕ್ಸ್ ಸಿನಿಮಾದ ಬಳಿಕ ನಟ ಸುದೀಪ್ ಈ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ತಾರಾಗಣದ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...
Zimowy dżem z wiciokrzewu Jak zrobić idealny domowy Wciągający Eksperyment Kulinarne: Konfitura Zaczarowane smaki Niesamowity dżem z rabarbaru z dodatkiem Odkryj sekrety przygotowania Tajemnice idealnego przygotowania klasycznego rabarbarowego dżemu: 7 Zamrożona Eksplozja Smaku: Odkrywaj sekrety doskonałego sernika bez konieczności pieczenia