ಕೊಡಗು : ಇಂಜೆಕ್ಷನ್ ಹಾಕಿಕೊಂಡು ಕೊಡಗು ಜಿಲ್ಲಾಸ್ಪತ್ರೆ ಸರ್ಜನ್ ಡಾ.ನಂಜುಡಯ್ಯ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಕುಶಾಲನಗರ ತಾಲೂಕಿನ ಹೊಸತೋಟದಲ್ಲಿ ಕಾರಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಅವರು ಪತ್ತೆಯಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಆತ್ಮಹತ್ಯೆಗೆ ಯತ್ನಿಸಲು ನಿಖರ ಕಾರಣ ತಿಳಿದು ಬಂದಿಲ್ಲ, ಘಟನೆ ನಡೆದ ಸ್ಥಳಕ್ಕೆ ಮಡಿಕೇರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.