ಕಳೆದ ವರ್ಷ ಕೋಲ್ಕತಾದ ಆರ್ ಜಿ ಕಾರ್ ಆಸ್ಪತ್ರೆಯಲ್ಲಿ 31 ವರ್ಷದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿ ಸಂಜೋಯ್ ರಾಯ್ ದೋಷಿ ಎಂದು ಸಾಬೀತಾಗಿದೆ.
ಸಿಯಾಲ್ಡಾ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಅನಿರ್ಬನ್ ದಾಸ್ ಅವರು ಈ ತೀರ್ಪು ನೀಡಿದ್ದಾರೆ. ಶಿಕ್ಷೆಯ ಪ್ರಮಾಣವನ್ನು ಕೋರ್ಟ್ ಸೋಮವಾರ ಪ್ರಕಟಿಸಲಿದೆ.
ಈ ಪ್ರಕರಣವು ಆಗಸ್ಟ್ 9 ರಂದು ಸ್ನಾತಕೋತ್ತರ ವೈದ್ಯಕೀಯ ತರಬೇತಿದಾರೆಯ ಅತ್ಯಾಚಾರ ಮತ್ತು ಕೊಲೆಯನ್ನು ಒಳಗೊಂಡಿದೆ, ಅವರ ನಿರ್ಜೀವ ದೇಹವು ಆಸ್ಪತ್ರೆಯ ಸೆಮಿನಾರ್ ಕೋಣೆಯಲ್ಲಿ ಪತ್ತೆಯಾಗಿದೆ. ಸೋಮವಾರ ಆರೋಪಿ ಸಂಜಯ್ ರಾವ್ ಗೆ ಕೋರ್ಟ್ ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ.
ಆರ್ ಜಿ ಕಾರ್ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸಂಜೋಯ್ ರಾಯ್ ತಪ್ಪಿತಸ್ಥ ಎಂದು ಕೋಲ್ಕತ್ತಾದ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ. ಶಿಕ್ಷೆಯ ವಿಚಾರಣೆ ಸೋಮವಾರ ನಡೆಯಲಿದೆ.
ವಿಚಾರಣೆಯಲ್ಲಿ, ಆರೋಪಿ ರಾಯ್ ತಾನು ನಿರಪರಾಧಿ ಎಂದು ಹೇಳಿಕೊಂಡನು ಮತ್ತು ಘಟನೆಯಲ್ಲಿ ತಾನು ಭಾಗಿಯಾಗಿಲ್ಲ ಎಂದು ಹೇಳಿದನು. ತರಬೇತಿ ವೈದ್ಯರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ರಾಯ್ ತಪ್ಪಿತಸ್ಥ ಎಂದು ನ್ಯಾಯಾಲಯ ತೀರ್ಪು ನೀಡಿದೆ.