
ಹಾಸನ : ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅತ್ಯಾಪ್ತ ಕೃಷ್ಣಗೌಡರನ್ನು ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಹಾಸನದ ಗ್ರಾನೈಡ್ ಫ್ಯಾಕ್ಟರಿ ಎದುರೇ ದುಷ್ಕರ್ಮಿಗಳು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಆಪ್ತ, ಉದ್ಯಮಿ ಕೃಷ್ಣಗೌಡನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.