ಬೆಂಗಳೂರು : ಬೆಂಗಳೂರಿನಲ್ಲಿ ಕೆಎಸ್ ಡಿ ಎಲ್(KSDL) ಅಧಿಕಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಡೆತ್ ನೋಟ್ ಬರೆದಿಟ್ಟು ಕೆಎಸ್ ಡಿ ಎಲ್ ಅಧಿಕಾರಿ ಅಮೃತ್ (40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
KSDL’ ನ ಮೆಟಿರಿಯಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿ ಅಮೃತ್ ಕೈಯಲ್ಲೇ ಡೆತ್ ನೋಟ್ ಹಿಡಿದುಕೊಂಡು ನೇಣಿಗೆ ಶರಣಾಗಿದ್ದಾರೆ. ಡಿ.28 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. 2019 ರಲ್ಲಿ 2 ನೇ ಮದುವೆಯಾಗಿದ್ದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಮಹಾಲಕ್ಷ್ಮೀ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.