ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿಯ ರೂಸ್ ಅsವೆನ್ಯೂ ನ್ಯಾಯಾಲಯ ಮಂಗಳವಾರ ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್ ಮತ್ತು ಇತರರಿಗೆ ಸಮನ್ಸ್ ಜಾರಿ ಮಾಡಿದೆ.
ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರು ಲಾಲು ಅವರ ಪುತ್ರರಾದ ತೇಜ್ ಪ್ರತಾಪ್ ಯಾದವ್ ಮತ್ತು ತೇಜಸ್ವಿ ಯಾದವ್ ಮತ್ತು ಮಗಳು ಹೇಮಾ ಯಾದವ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ.
ಪ್ರಕರಣದ ಎಲ್ಲಾ ಆರೋಪಿಗಳು ಮಾರ್ಚ್ ೧೧ ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನಿರ್ದೇಶಿಸಲಾಗಿದೆ.ಈ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ಸಲ್ಲಿಸಿದ ಚಾರ್ಜ್ಶೀಟ್ ಅನ್ನು ನ್ಯಾಯಾಧೀಶರು ಪರಿಗಣಿಸಿದ ನಂತರ ಹೊಸ ಸಮನ್ಸ್ ಹೊರಡಿಸಲಾಗಿದೆ.ಈ ಪ್ರಕರಣದಲ್ಲಿ 30 ಸರ್ಕಾರಿ ನೌಕರರು ಸೇರಿದಂತೆ ಒಟ್ಟು 78 ಜನರನ್ನು ಸಿಬಿಐ ಹೆಸರಿಸಿತ್ತು.ಲಾಲು ಪ್ರಸಾದ್ ಅವರ ಸಹಾಯಕ ಪ್ರೇಮ್ ಚಂದ್ ಗುಪ್ತಾ ಅವರಿಗೂ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.