ಬೆಂಗಳೂರು : ಬೆಂಗಳೂರಲ್ಲಿ ತಡರಾತ್ರಿ ಸರಣಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಮೆಡಿಕಲ್ ಶಾಪ್ , ಹಾಲಿನ ಅಂಗಡಿಯಲ್ಲಿ ದರೋಡೆ ಮಾಡಿದ ಖದೀಮರು ಲಕ್ಷಾಂತರ ಹಣ ಲೂಟಿ ಮಾಡಿದ್ದಾರೆ.
ಬೆಂಗಳೂರಿನ ಕೆಪಿ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯ ಚೋಳೂರು ಪಾಳ್ಯದಲ್ಲಿ ಖದೀಮರು ಮೆಡಿಕಲ್ ಶಾಪ್ , ಹಾಲಿನ ಅಂಗಡಿಯಲ್ಲಿ ದರೋಡೆ ಮಾಡಿ ಲಕ್ಷಾಂತರ ಹಣ ಲೂಟಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಒಂದೇ ರಾತ್ರಿ ಸರಣಿ ಕಳ್ಳತನ ನಡೆದಿದ್ದು, ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಕೆಪಿ ಅಗ್ರಹಾರ ಠಾಣೆ ಪೊಲೀಸರು ಧಾವಿಸಿ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.