ಬೆಂಗಳೂರು : ಜುಲೈ 15 ರಿಂದ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಈ ಹಿನ್ನೆಲೆ ವಿಧಾನಸೌಧದ ಸುತ್ತಾಮುತ್ತ 2 ಕಿಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ (ಸೆಕ್ಷನ್ 144) ಜಾರಿಗೊಳಿಸಲಾಗಿದೆ.
ಪ್ರತಿದಿನ ಬೆಳಗ್ಗೆ 6 ರಿಂದ ರಾತ್ರಿ 12 ಗಂಟೆವರೆಗೆ ನಿಷೇಧಾಜ್ಷೆ ಜಾರಿಯಲ್ಲಿರಲಿದ್ದು, ಈ ಅವಧಿಯಲ್ಲಿ ಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವುದು, ಮೆರವಣಿಗೆ ಮತ್ತು ಸಭೆ ಸೇರುವುದು, ಸ್ಫೋಟಕ ಸಿಡಿಸುವುದು, ಪ್ರತಿಕೃತಿ ದಹನ, ಘೋಷಣೆಗಳನ್ನು ಕೂಗುವುದು, ಶಸ್ತ್ರಾಸ್ತ್ರ ಹಾಗೂ ಮಾರಕಾಸ್ತ್ರಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ ಎಂದೂ ಆದೇಶದಲ್ಲಿ ತಿಳಿಸಿದ್ದಾರೆ.
6ನೇ ವಿಧಾನಸಭೆಯ 4ನೇ ಮುಂಗಾರು ಅಧಿವೇಶನ ಜುಲೈ 15 ರಿಂದ 26ರವರೆಗೆ ನಡೆಯಲಿದೆ ಎಂದು ಸ್ಪೀಕರ್ ಯು ಟಿ ಖಾದರ್ ತಿಳಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಜುಲೈ 15 ರಿಂದ ಒಟ್ಟು 9 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಅಧಿವೇಶನದಲ್ಲಿ ಸರ್ಕಾರದಿಂದ ಸ್ವೀಕರಿಸಲಾಗುವ ವಿಧೇಯಕಗಳನ್ನ ಪರ್ಯಾಲೋಚನೆಗೆ ಹಾಗೂ ಅಂಗೀಕಾರಕ್ಕೆ ತೆಗೆದುಕೊಳ್ಳಲಾಗುವುದು” ಎಂದು ಹೇಳಿದರು.