ನವದೆಹಲಿ : ಸಂಸತ್’ನಲ್ಲಿ ಬಿಜೆಪಿ-ಕಾಂಗ್ರೆಸ್ ಪಕ್ಷಗಳ ನಡುವೆ ನಡೆದ ಕೋಲಾಹಲದ ನಡುವೆ ಲೋಕಸಭೆ ಮತ್ತು ರಾಜ್ಯಸಭೆ ಕಲಾಪ ವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು.
ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ನೀಡಿದ ಹೇಳಿಕೆಗೆ ಗೃಹ ಸಚಿವ ಅಮಿತ್ ಶಾ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷಗಳು ಗದ್ದಲ ಎಬ್ಬಿಸಿದ ಹಿನ್ನೆಲೆಯಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯನ್ನು ಮುಂದೂಡಲಾಯಿತು. ನಿಯಮ 267 ರ ಅಡಿಯಲ್ಲಿ ಪ್ರತಿಪಕ್ಷಗಳ 4 ಗೊತ್ತುವಳಿಗಳನ್ನು ವಜಾಗೊಳಿಸಿದ ನಂತರ ಕೋಲಾಹಲದ ಮಧ್ಯೆ, ರಾಜ್ಯಸಭೆ ಲೋಕಸಭೆ ಯನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು.
ಬಾಬಾ ಸಾಹೇಬ್ ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಅವರ ಹೇಳಿಕೆಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಸಂವಿಧಾನ ರಚನಾಕಾರ ಎಂದು ಪರಿಗಣಿಸಲ್ಪಟ್ಟ ವ್ಯಕ್ತಿಯ ಬಗ್ಗೆ ಬಿಜೆಪಿಗೆ ಮೂಲಭೂತ ಗೌರವವಿಲ್ಲ ಎಂದು ಹೇಳಿದ್ದಾರೆ.