ಬಳ್ಳಾರಿ : ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವಿನ ತನಿಖೆಗೆ ಲೋಕಾಯಕ್ತ ಮುಂದಾಗಿದೆ.
ಹೌದು, ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದು, ಆಸ್ಪತ್ರೆಗೆ ಭೇಟಿ ನೀಡಿರುವ ಲೋಕಾಯುಕ್ತ ತಂಡ ತನಿಖೆ ನಡೆಸುತ್ತಿದ್ದು, ಮೃತ ಬಾಣಂತಿಯರ ಕುಟುಂಬದ ಕುರಿತು ಮಾಹಿತಿ ಕಲೆ ಹಾಕುತ್ತಿದೆ.
ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಬಳಕೆಗೆ ಯೋಗ್ಯವಲ್ಲ ಎಂದು ಕರ್ನಾಟಕ ರಾಜ್ಯ ಡ್ರಗ್ಸ್ ಲಾಜಿಸ್ಟಿಕ್ಸ್ ವರದಿ ನೀಡಿದ್ದರೆ, ಸೆಂಟ್ರಲ್ ಡ್ರಗ್ ಲ್ಯಾಬ್ (CDL) ಪಾಸಿಟಿವ್ ವರದಿ ನೀಡಿದೆ. ಇದನ್ನು ಉಲ್ಲೇಖಿಸಿ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ)ಗೆ ಪತ್ರ ಬರೆದು ಪ್ರಶ್ನೆ ಮಾಡಿದ್ದೇವೆ. ನಮ್ಮ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್ ವಿರುದ್ಧ ಪ್ರಾಸಿಕ್ಯೂಷನ್ಗೆ ಆದೇಶಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬಾಣಂತಿಯರ ಸಾವಿಗೆ ಐವಿ ದ್ರಾವಣ ಕೂಡ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿರುವ ಕುರಿತು ಇಲಾಖೆ ತೆಗೆದುಕೊಂಡಿರುವ ಕ್ರಮಗಳೇನು ಮತ್ತು ಟೆಸ್ಟಿಂಗ್ ವರದಿಗಳಲ್ಲಿ ವಿಳಂಬವೇಕೆ ಎಂದು ಅಧಿಕಾರಿಗಳಿಂದ ಮಾಹಿತಿ ಪಡೆದೆ. ಜೊತೆಗೆ ಐವಿ ರಿಂಗರ್ ಲ್ಯಾಕ್ಟೇಟ್ ನ 192 ಬ್ಯಾಚ್ ಗಳಲ್ಲಿ ಪರೀಕ್ಷೆಗೆ ಬಾಕಿ ಇರುವ ಬ್ಯಾಚ್ ಗಳ ವರದಿಯನ್ನು ಶೀಘ್ರದಲ್ಲೇ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದೆ. ಇನ್ನು, NABL ಲ್ಯಾಬ್ ನಲ್ಲಿ ಐವಿ ದ್ರಾವಣದ 192 ಬ್ಯಾಚ್ ಗಳು ಪಾಸಿಟಿವ್ ರಿಪೋರ್ಟ್ ಬಂದಿರುವ ಬಗ್ಗೆ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಲು ಔಷಧ ಸರಬರಾಜು ನಿಗಮಕ್ಕೆ ಸೂಚಿಸಿದೆ. ಜನರಿಗೆ ವಿತರಿಸುವ ಔಷಧಗಳನ್ನು ಸೂಕ್ತ ರೀತಿಯಲ್ಲಿ ಸಮಯಕ್ಕೆ ಸರಿಯಾಗಿ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.