ಬೆಂಗಳೂರು : ಬೆಳ್ಳಂ ಬೆಳಗ್ಗೆ ರಾಜ್ಯಾದ್ಯಂತ 25 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.
ಭ್ರಷ್ಟಾಚಾರ ಆರೋಪ ಕೇಳಿಬಂದಿರುವ ಹಿನ್ನೆಲೆ ರಾಜ್ಯಾದ್ಯಂತ 25 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ.
ಬೆಂಗಳೂರು, ಮಂಡ್ಯ, ಮೈಸೂರು ಸೇರಿದಂತೆ 25 ಕ್ಕೂ ಹೆಚ್ಚು ಕಡೆ ದಾಳಿ ನಡೆಸಲಾಗಿದೆ. ಬನಶಂಕರಿಯಲ್ಲಿರುವ ಅಬಕಾರಿ ಇಲಾಖೆ ಎಸ್. ಪಿ ಮೋಹನ್ ಮನೆ ಮೇಲೂ ದಾಳಿ ನಡೆಸಲಾಗಿದೆ. ಭ್ರಷ್ಟಾಚಾರ, ಆಕ್ರಮ ಆಸ್ತಿ ಗಳಿಸಿರುವ ಆರೋಪ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಮೂಲಕ ಭ್ರಷ್ಟ ಅಧಿಕಾರಿಗಳಿಗೆ ಮತ್ತೆ ಲೋಕಾಯುಕ್ತ ಅಧಿಕಾರಿಗಳು ಚಳಿ ಬಿಡಿಸಲು ಮುಂದಾಗಿದ್ದಾರೆ.