ಬೆಂಗಳೂರು : ಬೆಂಗಳೂರಿನ ಮಾಪನಸೌಧದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದೆ.
ಲಂಚಕ್ಕೆ ಬೇಡಿಕೆ ಹಾಗೂ ಫೈಲ್ ಪೆಂಡಿಂಗ್ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್, ಉಪ ಲೋಕಾಯುಕ್ತ ನ್ಯಾ.ಫಣೀಂದ್ರ ನೇತೃತ್ವದ ತಂಡ ದಾಳಿ ನಡೆಸಿದೆ.
6 ಎಸ್ ಪಿ ಸೇರಿ 40 ಕ್ಕೂ ಹೆಚ್ಚು ಅಧಿಕಾರಿಗಳು ದಾಳಿಯಲ್ಲಿ ಭಾಗಿಯಾಗಿದ್ದು, ರಿಜಿಸ್ಟರ್ ಬುಕ್ ಸೇರಿದಂತೆ ಹಲವು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.