alex Certify BREAKING : ರಾಮನಗರ ‘RTO’ ಕಚೇರಿ ಮೇಲೆ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ |Lokayukta Raid | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಮನಗರ ‘RTO’ ಕಚೇರಿ ಮೇಲೆ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ |Lokayukta Raid

ರಾಮನಗರ : ಮೈಸೂರಿನಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರೆ ಇತ್ತ ರಾಮನಗರ ಆರ್ ಟಿ ಒ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರಾಮನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ರಾಮನಗರ ಆರ್ ಟಿ ಒ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಅಧಿಕಾರಿ ಗಜೇಂದ್ರ ಬಾಬು ಮೊಬೈಲ್ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇತ್ತೀಚೆಗಷ್ಟೇ ಗಜೇಂದ್ರ ಬಾಬು ರಾಮನಗರಕ್ಕೆ ವರ್ಗಾವಣೆ ಆಗಿ ಬಂದಿದ್ದರು.

ಆರ್ ಟಿ ಒ ಕಚೇರಿಯಲ್ಲಿ ಕೋಟ್ಯಾಂತರ ರೂ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆ ಲೋಕಾಯುಕ್ತ ದಾಳಿ ನಡೆಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...